ಅಧಿಕಾರಕ್ಕೆ ಬಂದ್ರೆ ಬಿಜೆಪಿ ಜಾರಿ ಮಾಡಿದ ಮೀಸಲಾತಿ ರದ್ದು ಮಾಡ್ತೇವೆ: ಹೆಚ್‌ಡಿಕೆ

ನಾವು ಅಧಿಕಾರಕ್ಕೆ ಬಂದ್ರೆ ಬಿಜೆಪಿ ಜಾರಿ ಮಾಡಿದ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮುಸ್ಲಿಂರ OBC ಮೀಸಲಾತಿ ರದ್ದುಗೊಳಿಸಿದ್ದು ಸರಿಯಲ್ಲ ಎಂದಿದ್ದಾರೆ.

Share this Video
  • FB
  • Linkdin
  • Whatsapp

ನಾವು ಅಧಿಕಾರಕ್ಕೆ ಬಂದ್ರೆ ಬಿಜೆಪಿ ಜಾರಿ ಮಾಡಿದ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮುಸ್ಲಿಂರ OBC ಮೀಸಲಾತಿ ರದ್ದುಗೊಳಿಸಿದ್ದು ಸರಿಯಲ್ಲ, ಸಮಾಜವನ್ನು ಒಡೆಯ ದೃಷ್ಟಿಯಿಂದ ಸರಕಾರ ಮೀಸಲು ನಾಟಕ ಆಡಿದೆ. ಮುಸ್ಲಿಮರು ಗಲಾಟೆಗೆ ಮುಂದಾಗಲಿ, ಆ ಮೂಲಕ ತನ್ನ ಬೇಳೆ ಬೇಯಿಸಿಕೊಳ್ಳುವ ಈ ಸರಕಾರದ ದುರುದ್ದೇಶವಾಗಿತ್ತು. ಮುಸ್ಲಿಮರು ಬೀದಿಗಿಳಿದಿದ್ದರೆ ಪರಿಸ್ಥಿತಿ ಏನಾಗಿರುತ್ತಿತ್ತು? ಅಮಾಯಕ ಜನ ಬಲಿಯಾಗಿದ್ದರೆ ಯಾರು ಹೊಣೆ ? ರಕ್ತಪಾತ ಮಾಡಲು ಬಿಜೆಪಿಯವರು ಕುತಂತ್ರ ಹೂಡಿದ್ದಾರೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು .

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video