ಬೆಳಗಾವಿಯಿಂದ 11 ಜನ ಗೆದ್ದಿರುವುದು ಸ್ವಾಭಿಮಾನದ ಪ್ರತೀಕವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್
ಸಾಮೂಹಿಕ ಹಾಗೂ ಸತೀಶ್ ಜಾರಕಿಹೊಳಿ ನಾಯಕತ್ವದಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ನಾವು ನಾಯಕರಿಗೆ ಹೇಳಿದ್ವಿ. ಹಾಗೆಯೇ 11 ಕ್ಷೇತ್ರಗಳಲ್ಲಿ ಗೆದ್ದಿದ್ದೀವಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಹೇಳಿದ್ದಾರೆ.
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರ ಸೋತ್ರೆ ನಮಗೆ ಅಪಮಾನ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಕ್ಕರ್ ನೀಡಿದ್ದಾರೆ. ನನಗೆ ನನ್ನ ಜನ ಸನ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಹೈಕಮಾಂಡ್‌ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಎಲ್‌ಪಿ ನಾಯಕ ಸಿದ್ದರಾಮಯ್ಯರಿಗೆ, ನಾವು ಜಿಲ್ಲೆಯ ಎಲ್ಲಾ ನಾಯಕರು ಸಾಮೂಹಿಕ ಹಾಗೂ ಸತೀಶ್ ಜಾರಕಿಹೊಳಿ ನಾಯಕತ್ವದಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲೋದಾಗಿ ಹೇಳಿದ್ವಿ. ಹಾಗೆಯೇ 11 ಸೀಟ್ ಗೆದ್ದು ತೋರಿಸಿದ್ದೀವಿ ಎಂದು ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣ ಇತಿಹಾಸದಲ್ಲಿ ಇಷ್ಟೊಂದು ಸೀಟ್ ಬಂದಿರಲಿಲ್ಲ. ಬೆಳಗಾವಿ ಜಿಲ್ಲೆಯೊಂದರಿಂದಲೇ 11 ಜನ ಹೋಗುತ್ತಿರೋದು ಸ್ವಾಭಿಮಾನದ ಪ್ರತೀಕವಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಇದನ್ನೂ ವೀಕ್ಷಿಸಿ: ಈ ವಯಸ್ಸಿನಲ್ಲಿ, ಆರೋಗ್ಯದ ಸಮಸ್ಯೆ ನಡುವೆಯೂ ದೇವೇಗೌಡರನ್ನು ಸುತ್ತಾಡಿಸಿದ್ದು ತಪ್ಪು: ಚಲುವರಾಯಸ್ವಾಮಿ