ವೀಡಿಯೋ ನೋಡಿ: ಕೈತಪ್ಪಿದ ಟಿಕೆಟ್, ಬಿಎಸ್‌ವೈ ಪುತ್ರನ ವಿರುದ್ಧ ಬಂಡಾಯ ಸ್ಪರ್ಧೆ ಘೋಷಿಸಿದ ಈಶ್ವರಪ್ಪ!

ಪುತ್ರನಿಗೆ ಟಿಕೆಟ್ ತಪ್ಪಿಸಲಾಗಿದೆ ಎಂದು ಆರೋಪಿಸಿದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿದ್ದಾರೆ. ಬಿಜೆಪಿಗೆ ಪಾಠ ಕಲಿಸಲು ಮುಂದಾಗಿರುವ ಈಶ್ವರಪ್ಪ ಶಿವಮೊಗ್ಗದಿಂದ ಸ್ವತಂತ್ರ ಸ್ಪರ್ಧೆ ಘೋಷಿಸಿದ್ದಾರೆ. ಈಶ್ವರಪ್ಪ ನಿರ್ಧಾರಕ್ಕೆ ಬಿಜೆಪಿ ನಾಯಕರ ಪ್ರತಿಕ್ರಿಯೆ, ಚುನಾವಣಾ ಬಾಂಡ್ ಕೋಲಾಹಲ, ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

First Published Mar 15, 2024, 10:56 PM IST | Last Updated Mar 16, 2024, 1:06 PM IST

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಕರ್ನಾಟಕದಲ್ಲಿ ಕೋಲಾಹಲ ಸೃಷ್ಟಿಸಿದೆ. ಈ ಪೈಕಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಕೆರಳಿ ಕೆಂಡವಾಗಿದ್ದಾರೆ. ಪುತ್ರನಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ ಈಶ್ವರಪ್ಪ ಇದೀಗ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.  ಶಿವಮೊಗ್ಗದಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸಿದ ಈಶ್ವರಪ್ಪ, ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಈಶ್ವರಪ್ಪಗೆ ಟಿಕೆಟ್ ನಿರಾಕರಿಸಲಾಗಿತ್ತು. ಈ ವೇಳೆ ಪುತ್ರನಿಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತು. ಚುನಾವಣಾ ರಾಜಕೀಯಿಂದ ದೂರ ಸರಿದ ಈಶ್ವರಪ್ಪಗೆ ಇದೀಗ ಬಿಜೆಪಿ ಮತ್ತೆ ಹಿನ್ನೆಡೆಯಾಗಿದೆ. ಪುತ್ರನಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಭರವಸೆ ಮುರಿದ ಬಿಜೆಪಿ ಮಾಜಿ ಸಿಎಂ ಬೊಮ್ಮಾಯಿಗೆ ಟಿಕೆಟ್ ಘೋಷಣೆ ಮಾಡಿದೆ. ಇದರಿಂತ ಕೆರಳಿದ ಈಶ್ವರಪ್ಪ ಇಂದು ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ದ ಬಂಡಾಯವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.