News Hour: ದೇಶ ತುಂಡು ಮಾಡುವ ಮಾತನಾಡಿದ್ದ ಡಿಕೆಸು ವಿರುದ್ಧ ಹೃದಯ ಒಂದು ಮಾಡುವ ಡಾ.ಸಿಎನ್‌ ಮಂಜುನಾಥ್‌ ಫೈಟ್‌

ಬಿಜೆಪಿ ತನ್ನ 2ನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ. ನಿರೀಕ್ಷೆಯಂತೆಯೇ ಕೆಲವು ಹಾಲಿ ಸಂಸದರಿಗೆ ಟಿಕೆಟ್‌ ಮಿಸ್‌ ಆಗಿದೆ. ಬೆಂಗಳೂರು ಗ್ರಾಮಾಂತರಕ್ಕೆ ಬಿಜೆಪಿ ಪ್ರಬಲ ನಾಯಕನನ್ನು ಕಣಕ್ಕಿಳಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ.13): ಮುಂಬರುವ ಲೋಕಸಭೆ ಚುನಾವಣೆಯ ವೇಳೆ ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್‌ ಫೈಟ್‌ಗೆ ಸಾಕ್ಷಿಯಾಗಲಿದೆ. ಅದಕ್ಕೆ ಕಾರಣ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸಹೋದರ ಡಿಕೆ ಸುರೇಶ್‌ ಅವರ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಗೆ ಟಿಕೆಟ್‌ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಎಚ್‌ಡಿ ದೇವೇಗೌಡರ ಅಳಿಯ ಡಾ. ಸಿಎನ್‌ ಮಂಜುನಾಥ್‌ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರದ ಫೈಟ್‌ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುವ ಸಾಧ್ಯತೆ ಇದೆ.

ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

ಅದರೊಂದಿಗೆ ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡರಿಗೆ ಕೊಕ್‌ ನೀಡಲಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್‌ ನೀಡಲಾಗಿದೆ. ಮಾಜಿ ಸಿಎಂ ಬೊಮ್ಮಾಯಿ ಹಾವೇರಿಯಿಂದ ಕಣಕ್ಕಿಳಿಯಲಿದ್ದಾರೆ.

Related Video