
ಸಚಿವರಿಗೆ ಎಲೆಕ್ಷನ್ ಟಾಸ್ಕ್ ಕೊಟ್ಟ ಸಿಎಂ: ಜವಾಬ್ದಾರಿ ಸರಿಯಾಗಿ ನಿರ್ವಹಿಸದಿದ್ದರೆ ಸಂಪುಟದಿಂದ ಕೊಕ್ ?
ಸಿಎಂ ಸಿದ್ದರಾಮಯ್ಯ ನಡೆಸಿದ ಬ್ರೇಕ್ ಫಾಸ್ಟ್ ಸಭೆಯಲ್ಲಿ ಸಚಿವರಿಗೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಖಡಕ್ ಸೂಚನೆ ನೀಡಲಾಗಿದೆ.
ಲೋಕಸಭಾ ಚುನಾವಣೆ ಗೆಲ್ಲಲು ರಾಜ್ಯ ಕಾಂಗ್ರೆಸ್(Congress) ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಂಪುಟದ ಸಚಿವರಿಗೆ(Cabinet ministers) ಲೋಕಸಭೆ ಎಲೆಕ್ಷನ್(Loksabha election) ಜವಾಬ್ದಾರಿ ನೀಡಲಾಗಿದೆ. ಒಂದು ವೇಳೆ ಈ ಟಾಸ್ಕ್‌ನನ್ನು ಸರಿಯಾಗಿ ನಿಭಾಯಿಸದಿದ್ದರೇ, ಸಚಿವ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಒಂದು ವೇಳೆ ಲೋಕಸಭೆಯಲ್ಲಿ ಗೆಲ್ಲಲಿದ್ರೆ, ಕ್ಯಾಬಿನೆಟ್‌ನಲ್ಲಿ ಮುಂದುವರಿಸಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆಯಂತೆ. ಸಚಿವರಿಗೆ ಆರ್ಥಿಕ ಹೊಣೆಗಾರಿಕೆ ಸೇರಿ ಎಲ್ಲಾ ಜವಾಬ್ದಾರಿ ನೀಡಲಾಗಿದೆ. ಈ ಬಗ್ಗೆ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರಂತೆ.
Add Asianetnews Kannada as a Preferred Source

ಇದನ್ನೂ ವೀಕ್ಷಿಸಿ: ಐದು ರಾಜ್ಯಗಳ ಚುನಾವಣೆಯಲ್ಲಿ ಯಾರಿಗೆ ಅಧಿಕಾರ? ಎಂಪಿ, ರಾಜಸ್ಥಾನದಲ್ಲಿ ಗೆಲ್ಲೋರು ಯಾರು ?