Party Rounds: ಲಂಚಾವಾತಾರದಲ್ಲಿ ನನ್ನ ಪಾತ್ರ ಏನೂ ಇಲ್ಲ, ರಾಜಕೀಯ ಷಡ್ಯಂತ್ರ: ಮಾಡಾಳ್ ವಿರೂಪಾಕ್ಷಪ್ಪ

ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

First Published Mar 6, 2023, 9:22 PM IST | Last Updated Mar 6, 2023, 9:22 PM IST

ಬೆಂಗಳೂರು (ಮಾ.06): ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಮಾಡಾಳ್‌ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಶಾಸಕರು ನಾಪತ್ತೆಯಾಗಿದ್ದಾರೆ. ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಬರುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ನೀಡಿದ್ದಾರೆ. ಸೋಮವಾರ ವಕೀಲರ ಮೂಲಕ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ನ್ಯಾಯಮೂರ್ತಿಗಳ ಮುಂದೆ ಮನವಿ ಮಾಡಿದ್ದಾರೆ. ಜೊತೆಗೆ ಲಂಚಾವಾತಾರದಲ್ಲಿ ನನ್ನ ಪಾತ್ರ ಏನೂ ಇಲ್ಲ, ಮಗನ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ, ರಾಜಕೀಯವಾಗಿ ಮುಗಿಸಲು ವಿರೋಧಿಗಳು ಷಡ್ಯಂತ್ರ ಮಾಡಿದ್ದಾರೆ. ದೂರು ಕೊಟ್ಟವರು ನನ್ನ ವಿರುದ್ಧ ಮಸಲತ್ತು ಮಾಡಿದ್ದಾರೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿಯಲ್ಲಿ ಹೇಳಿದ್ದಾರೆ.

Video Top Stories