ಮಹಾತ್ಮ ಗಾಂಧಿಯವರನ್ನು ಕೊಂದವರು ನನ್ನನ್ನ ಬಿಡ್ತಾರಾ? ಸಿದ್ದರಾಮಯ್ಯ ಆತಂಕ!

ಮೊಟ್ಟೆ ಎಸೆತ ಪ್ರಕರಣ ಕುರಿತು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಗೋಡ್ಸೆಯನ್ನು ಪೂಜಿಸುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಸಿದ್ದು ಹೇಳಿದ್ದಾರೆ.

First Published Aug 19, 2022, 6:27 PM IST | Last Updated Aug 19, 2022, 6:27 PM IST

ಕೊಡುಗು ಪ್ರವಾಸದ ಬಳಿಕ ಚಿಕ್ಕಮಗಳೂರಿನಲ್ಲೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ ಎದುರಾಯಿತು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿದ್ದು, ಮಹಾತ್ಮಾ ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡ್ತಾರಾ ಎಂದು ಆತಂಕ ವ್ಯಕ್ತಪಡಿಸಿದರು. ಇತ್ತ ಪ್ರಮೋದ್ ಮುತಾಲಿಕ್ ಮೊಟ್ಟೆ ಎಸೆತವನ್ನು ಖಂಡಿಸಿದ್ದಾರೆ. ಆದರೆ ಪ್ರತಿಭಟನೆ ಮಾಡಿದ ಯುವಕರನ್ನು ಮುತಾಲಿಕ್ ಅಭಿನಂದಿಸಿದ್ದಾರೆ. ಮೊಟ್ಟೆ ಸಂಸ್ಕೃತಿಯನ್ನು ಬೆಳೆಸಿದ್ದು ಕಾಂಗ್ರೆಸ್ ಇದೀಗ ಅವರಿಗೆ ತಿರುಗುಬಾಣವಾಗಿದೆ ಎಂದು ಮುತಾಲಿಕ್ ಹೇಳಿದ್ದಾರೆ.