ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಚುನಾವಣೆ ಕೋಲಾರದಿಂದ ಕಣಕ್ಕೆ ಇಳಿಯುವಂತೆ ಒತ್ತಡವನ್ನು ಹಾಕಲಾಗುತ್ತಿದೆ.
 

Share this Video
  • FB
  • Linkdin
  • Whatsapp

ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಕೋಲಾರದಿಂದ ಕಣಕ್ಕೆ ಇಳಿಯುತ್ತಾರೆ ಎನ್ನಲಾಗ್ತಿದೆ. ಇಲ್ಲಿಂದಲೇ ಸ್ಪರ್ಧಿಸುವಂತೆ ಒತ್ತಡವನ್ನು ಹಾಕಲಾಗುತ್ತಿದೆ. ಅಲ್ಲದೇ ಕೋಲಾರದಲ್ಲಿ ನೀವೇ ಸ್ಪರ್ಧಿಸಿ ಎಂದು ನಾರಾಯಣ ಸ್ವಾಮಿ ಮನವಿ ಸಹ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಬಿಜೆಪಿಯ(BJP) ಮುನಿಸ್ವಾಮಿ ಸೋಲಿಸಲು ನಾರಾಯಣ ಸ್ವಾಮಿ ಪಣತೊಟ್ಟಂತೆ ಕಾಣುತ್ತಿದೆ. ಆದ್ರೆ ಕೋಲಾರದಲ್ಲಿ(Kolar) ನಿಲ್ಲುವ ಬಗ್ಗೆ ಖರ್ಗೆ ಇನ್ನೂ ಮನಸ್ಸು ಮಾಡಿಲ್ಲ ಎಂಬ ಮಾಹಿತಿ ದೊರೆತಿದೆ. ಒಟ್ಟಿನಲ್ಲಿ ಖರ್ಗೆ ಸ್ಪರ್ಧೆ ಬಗ್ಗೆ ಇನ್ನೂ ಸಹ ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ: ಬಾಗಿನ ಅರ್ಪಣೆ ಮುನ್ನವೇ ಕಬಿನಿ ಜಲಾಶಯ ಖಾಲಿ..ಖಾಲಿ..!

Related Video