
ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!
ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ. ಇಂಡುವಾಳು ಸಚ್ಚಿದಾನಂದ ಹೇಳಿಕೆಯಂತೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ
ಮಂಡ್ಯ(ಆ.19): ಮಂಡ್ಯದಲ್ಲಿ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ. ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರುತ್ತಾರೆ ಅಂತ ಹೇಳಲಾಗುತ್ತಿದೆ. ಸುಮಲತಾ ಅವರು ತೆರೆಮರೆಯಲ್ಲಿ ಬಿಜೆಪಿ ಸೇರ್ಪಡೆ ಕುರಿತು ಪ್ಲಾನ್ ಮಾಡಿದ್ದಾರೆ. ಬಿಜೆಪಿ ಸೇರ್ಪಡೆಯಾಗುತ್ತೇನೆ ಅಂತ ಸುಮಲತಾ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಹೇಳಿದ್ದಾರೆ. ಇಂಡುವಾಳು ಸಚ್ಚಿದಾನಂದ ಹೇಳಿಕೆಯಂತೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್‌ನಲ್ಲಿ ರಾಷ್ಟ್ರನಾಯಕ ಸಮ್ಮುಖದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅಂತ ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: 10 ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ