Asianet Suvarna News Asianet Suvarna News

ಮಂಡ್ಯ ಜೆಡಿಎಸ್ ಶಾಸಕರಿಗೆ ಟಾಂಗ್ ಕೊಟ್ಟ ಸುಮಲತಾ ಅಂಬರೀಶ್

ಸದನದಲ್ಲಿ ವೈಯಕ್ತಿಕ ಟೀಕೆ ಮಾಡುವ ಬದಲು ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಲಿ ಜೆಡಿಎಸ್‌ ಶಾಸಕರುಗಳಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟಿದ್ದಾರೆ.

ಮಂಡ್ಯ, (ಸೆ.13): ಸದನದಲ್ಲಿ ವೈಯಕ್ತಿಕ ಟೀಕೆ ಮಾಡುವ ಬದಲು ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಲಿ ಜೆಡಿಎಸ್‌ ಶಾಸಕರುಗಳಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಮನೆ ನಿರ್ಮಾಣಕ್ಕೆ ಪೂಜೆ: ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ

ಮಂಡ್ಯದಲ್ಲಿ ಇಂದು (ಸೆ.13) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಶಾಸಕರು ಅಧಿವೇಶನದಲ್ಲಿ ಏನು ಬೇಕಾದರೂ ಮಾತನಾಡಲಿ. ಮಂಡ್ಯದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ಮಾಡಿದರೆ ಅದನ್ನು ಸ್ವಾಗತಿಸುತ್ತೇನೆ. ಮಂಡ್ಯದಲ್ಲಿ ದೊಡ್ಡ ದೊಡ್ಡ ಸಮಸ್ಯೆಗಳಿವೆ. ಕೊrOನಾ ಸಂಕಷ್ಟ, ಜನರ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡಲಿ. ಅದನ್ನು ಬಿಟ್ಟು ವೈಯಕ್ತಿವಾಗಿ ನನ್ನ ವಿಚಾರಗಳನ್ನು ಚರ್ಚೆ ಮಾಡುವುದು ಅವರಿಗೆ ಬಿಟ್ಟಿದ್ದು ಎಂದರು.

Video Top Stories