ಬಿ.ವಿ. ನಾಯಕ್‌ ಕಾಂಗ್ರೆಸ್‌ಗೆ ಗುಡ್‌ ಬೈ: ಜೆ.ಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

ಬಿ.ವಿ. ನಾಯಕ್‌ ಕಾಂಗ್ರೆಸ್‌ಗೆ ರಾಜೀನಾಮೆ
ಜೆ.ಪಿ.ನಡ್ಡಾ ಸಮ್ಮುಖದಲ್ಲಿ ನಾಯಕ್‌ ಬಿಜೆಪಿಗೆ ಸೇರ್ಪಡೆ
ರಘು ಆಚಾರ್‌ ಕಾಂಗ್ರೆಸ್‌ಗೆ ಬಿಟ್ಟು ಜೆಡಿಎಸ್‌ ಸೇರ್ಪಡೆ

First Published Apr 19, 2023, 12:07 PM IST | Last Updated Apr 19, 2023, 1:36 PM IST

ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರದಲ್ಲೇ ಇದೆ. ಈ ಹಿನ್ನೆಲೆ ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತಿವೆ. ಇನ್ನೂ ಟಿಕೆಟ್‌ ಸಿಗದೆ ನಿರಾಶರಾದ ಮುಖಂಡರು ಪಕ್ಷಾಂತರವನ್ನು ಸಹ ಮಾಡುತ್ತಿದ್ದಾರೆ. ಇದೀಗ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ. ನಾಯಕ್‌ ಸಹ ಇದೆ ಹಾದಿಯನ್ನು ಹಿಡಿದಿದ್ದಾರೆ. ಇವರು ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿ, ಜೆ.ಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇವರು ಮಾನವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದ್ರೆ ಟಿಕೆಟ್‌ ಸಿಗದ ಹಿನ್ನೆಲೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಲ್ಹಾದ್‌ ಜೋಷಿ, ಜೆ.ಪಿ. ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇತ್ತಾ ರಘು ಆಚಾರ್‌ ಸಹ ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಜೆಡಿಎಸ್‌ಗೆ ಪಲಾಯನ ಮಾಡಿದ್ದಾರೆ. ಅಲ್ಲದೇ ನಾಮಪತ್ರ ಸಲ್ಲಿಕೆ ವೇಳೆ ಬೃಹತ್‌  ರೋಡ್‌ ಶೋ ನಡೆಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ತಣ್ಣಗಾಗದ ಬಂಡಾಯ: ಬಿಜೆಪಿಯಲ್ಲಿ ಮತ್ತೆರಡು ವಿಕೆಟ್‌ ಪತನ

Video Top Stories