ಆಪ್‌ ತೆಕ್ಕೆಗೆ ದಿಲ್ಲಿ ಮಹಾನಗರ ಪಾಲಿಕೆ, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಯಾರಿಗೆ?

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್‌ಗೆ ಗದ್ದುಗೆ, ಬಿಜೆಪಿಗೆ ಕುಸಿತ, ಗುಜರಾತ್‌ನಲ್ಲಿ 27 ವರ್ಷದಿಂದ ಬಿಜೆಪಿ ಆಡಳಿತ, ದಾಖಲೆ ಮುರಿಯುತ್ತ ಕೇಸರಿ ಪಾರ್ಟಿ, ಹಿಮಾಚಲದಲ್ಲಿ ಸಂಪ್ರದಾಯಕ್ಕೆ ಬ್ರೇಕ್ ಬೀಳುತ್ತಾ? ಯಾರಿಗೆ ಅಧಿಕಾರ? ಸೇರಿದಂತೆ ಇಂದಿನ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

First Published Dec 7, 2022, 11:02 PM IST | Last Updated Dec 7, 2022, 11:02 PM IST

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 134 ಸ್ಥಾನ ಗೆದ್ದು ಅಧಿಕಾರಕ್ಕೇರಿದೆ. ಆದರೆ ಕಳೆದ 15 ವರ್ಷದಿಂದ ಅಧಿಕಾರದಲ್ಲಿದ್ದ ಬಿಜೆಪಿ ಇದೀಗ ಎರಡನೇ ಪಕ್ಷವಾಗಿ ಕುಸಿದಿದೆ. ಆದರೆ ಕಾಂಗ್ರೆಸ್ ಕೇವಲ 9 ವಾರ್ಡ್ ಗೆದ್ದು ಪಾತಾಳಕ್ಕೆ ಇಳಿದಿದೆ. ಡಿಸೆಂಬರ್ 8ಕ್ಕೆ ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲಿದೆ.  ಸಮೀಕ್ಷೆಗಳ ಪ್ರಕಾರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾನೇರ ಸ್ಪರ್ಧೆ ಇದೆ ಎಂದಿದೆ. ಇತ್ತ ಪ್ರತಿ 5 ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಹಿಮಾಚಲದಲ್ಲಿ ಈ ಬಾರಿ ಮತ್ತೆ ಬಿಜೆಪಿಗೆ ಅಧಿಕಾರ ನೀಡಿ ಸಂಪ್ರದಾಯಕ್ಕೆ ಬ್ರೇಕ್ ಹಾಕುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ.ಕಳೆದ 27 ವರ್ಷಗಳಿಂದ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಈ ಬಾರಿ ಸಮೀಕ್ಷೆಗಳ ಪ್ರಕಾರ ಬಿಜೆಪಿ ಅಧಿಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎನ್ನುತ್ತಿದೆ. ಆದರೆ ಸಮೀಕ್ಷೆಗಳು ಹೇಳುತ್ತಿರುವುದೇನು? ಗುಜರಾತ್‌ನ ರಿಯಾಲಿಟಿ ಏನು? ಇಲ್ಲಿದೆ ಸಂಪೂರ್ಣ ಚಿತ್ರಣ