
ಅಸಮರ್ಥ, ಕೈಲಾಗಲ್ಲ ಎಂದು ಟೀಕಿಸಿದ್ದ ಸಿದ್ದರಾಮಯ್ಯಗೆ ಆರಗ ತಿರುಗೇಟು
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ನನಗೆ ಅವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿದ್ದರಾಮಯ್ಯನವರಿಗೆ ತಿರಗೇಟು ಕೊಟ್ಟಿದ್ದಾರೆ.
ಬೆಂಗಳೂರು, (ಏ.10): ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'
ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ನನಗೆ ಅವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿದ್ದರಾಮಯ್ಯನವರಿಗೆ ತಿರಗೇಟು ಕೊಟ್ಟಿದ್ದಾರೆ.