ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು. ಸ್ವಾಮೀಜಿ ನೀಡಿದ ಮಠಗಳ ಪರ್ಸೆಂಟೇಜ್ ವ್ಯವಹಾರದ ಹೇಳಿಕೆಗೆ ರಾಜ್ಯದ ಹಲವು ರಾಜಕಾರಿಣಿಗಳು ಪ್ರತಿಕ್ರಿಯಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಏ.18): ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು.

Bagalkot: ಮಠಮಾನ್ಯಗಳ ಅನುದಾನದಲ್ಲಿ 30 % ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಶ್ರೀ

ಇನ್ನು ಇದಕ್ಕೆ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯಿಸಿದ್ದು, ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಕಾಂಗ್ರೆಸ್ ಪದಾಧಿಕಾರಗಳ ತರ ಮಾತಾಡ್ತಾರೆ ಎಂದು ಕಿಡಿಕಾರಿದ್ದಾರೆ. 

Related Video