Belagavi Session: ಭೈರತಿ ಬಸವರಾಜ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು, ಅಧವೇಶನದಲ್ಲಿ ಕೋಲಾಹಲ
ಭೂ ಒತ್ತುವರಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ ಅವರ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಇದರಿಂದ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಕೋಲಾಹಲ ಉಂಟಾಯ್ತು.
ಬೆಳಗಾವಿ, (ಡಿ.17): ಭೂ ಒತ್ತುವರಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ ಅವರ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಇದರಿಂದ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಕೋಲಾಹಲ ಉಂಟಾಯ್ತು.
Congress Protest: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮಾ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ನಿಲುವಳಿ ಸೂಚನೆ ಮಂಡಿಸಿ ನಿಯಮ 60ರಡಿ ಇದು ಅತ್ಯಂತ ಗಂಭೀರವಾದ ವಿಷಯವಾಗಿರುವುದರಿಂದ ಚರ್ಚೆಗೆ ಅವಕಾಶ ಕೊಡಬೇಕೆಂದು ಪಟ್ಟು ಹಿಡಿದರು. ಇದನ್ನು ಒಪ್ಪದ ಕಾಗೇರಿಯವರು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಚರ್ಚೆಗೆ ಕಾನೂನಿನಲ್ಲಿ ಅವಕಾಶವಿಲ್ಲ. ಹಿಂದೆ ಏನು ನಡೆದಿತ್ತೋ ಎಂಬುದು ಮುಖ್ಯವಲ್ಲ. ನಾನು ಸದನದ ನಿಯಮಾವಳಿ ಪ್ರಕಾರವೇ ನಡೆದುಕೊಂಡಿದ್ದೇನೆ ಎಂದು ಸಮರ್ಥಿಸಿಕೊಂಡರು.