
'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'
ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.
ವಿಜಯಪುರ, (ಜೂನ್.08):: ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.
'ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ'
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ನಾಯಕನಾಗುವ ಎಲ್ಲಾ ಕ್ವಾಲಿಟಿ ಇವೆ. ಏನೇ ಜವಾಬ್ದಾರಿ ನೀಡುವುದು ಹೈಕಮಾಂಡ್‍ಗೆ ಬಿಟ್ಟಿದ್ದು. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ ಎಂದರು.