
ಕಳಪೆ ಔಷಧ ವಿತರಣೆ: ಕೇಂದ್ರದ ಗಮನ ಸೆಳೆದ ಸಚಿವ ದಿನೇಶ್ ಗುಂಡೂರಾವ್! Dinesh Gundu Rao
ವಿಜಯಪುರದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕಳಪೆ ಮಟ್ಟದ ಔಷಧ ವಿತರಣೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಈ ಬಗ್ಗೆ ಈಗಾಗಲೇ ಕೇಂದ್ರ ಸಚಿವರ ಗಮನ ಸೆಳೆದಿದ್ದು, ಔಷಧ ತಯಾರಿಕಾ ಕಂಪನಿಗಳ ಮೇಲೆ ಹೆಚ್ಚಿನ ನಿಯಂತ್ರಣ ಹೇರಲು ಒತ್ತಾಯಿಸಿದ್ದಾರೆ. ಗುಣಮಟ್ಟದ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ ಅವರು, ಮತ್ತೊಮ್ಮೆ ಕೇಂದ್ರದ ಗಮನ ಸೆಳೆಯುವುದಾಗಿ ತಿಳಿಸಿದರು. ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಬಗ್ಗೆ ಮಾತನಾಡಿದ ಸಚಿವರು, ಭಾರತ ತಂಡ ಯಾರ ಜೊತೆ ಆಡಿದರೂ ಗೆಲ್ಲಬೇಕು, ಅದರಲ್ಲೂ ಪಾಕಿಸ್ತಾನದ ವಿರುದ್ಧ ಗೆಲ್ಲಲೇಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಭಾರತ ತಂಡ ಉತ್ತಮ ಆಟಗಾರರನ್ನು ಹೊಂದಿದ್ದು, ನಾಳಿನ ಪಂದ್ಯ ಮಾತ್ರವಲ್ಲ, ಟ್ರೋಫಿಯನ್ನೂ ಗೆದ್ದು ಬರಲಿ ಎಂದು ಶುಭ ಹಾರೈಸಿದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared