Asianet Suvarna News Asianet Suvarna News

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಸಂಪುಟ ವಿಸ್ತರಣೆಗೆ ಪಟ್ಟು ಹಿಡಿದ ಸಾಹುಕಾರ

 ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಚರ್ಚೆ ಗರಿಗೆದರಿದೆ. ಮತ್ತೊಂದೆಡೆ ಇತ್ತ ಬೆಳಗಾವಿಯಲ್ಲಿ ಮಾತನಾಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರು ಸಂಪುಟ ವಿಸ್ತರಣೆಗೆ ಪಟ್ಟು ಹಿಡಿದಿದ್ದಾರೆ.

ಬೆಳಗಾವಿ, (ಜ.02): 25 ವರ್ಷಗಳ ಬಳಿಕ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಭಾಗವಹಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. 

ಆಪ್ತ ನಾಯಕರೊಂದಿಗೆ ಅರುಣ್ ಸಿಂಗ್ ಚರ್ಚೆ: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಈ ಹಿನ್ನೆಲೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಚರ್ಚೆ ಗರಿಗೆದರಿದೆ. ಮತ್ತೊಂದೆಡೆ ಇತ್ತ ಬೆಳಗಾವಿಯಲ್ಲಿ ಮಾತನಾಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರು ಸಂಪುಟ ವಿಸ್ತರಣೆಗೆ ಪಟ್ಟು ಹಿಡಿದಿದ್ದಾರೆ.