Asianet Suvarna News Asianet Suvarna News

ಶುರುವಾಯ್ತು ಗುಂಪುಗಾರಿಕೆ: ಸಾಹುಕಾರ ಮನೆಯಲ್ಲಿ ಬಿಜೆಪಿ ಶಾಸಕರ ರಹಸ್ಯ ಸಭೆ

ಶಾಸಕರ ಗುಂಪೊಂದು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬಿಜೆಪಿ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು, (ನ.11): ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸಂಪುಟ ವಿಸ್ತರಣೆ ಸರ್ಕಸ್‌ ಶುರುವಾಗಿದೆ. ಖುದ್ದು ಬಿಎಸ್ ಯಡಿಯೂರಪ್ಪನವರೇ ಈ  ಬಗ್ಗೆ ಹೇಳಿಕೆ ಕೊಟ್ಟಿದ್ದು, ಶೀಘ್ರದಲ್ಲೇ ಕೇಂದ್ರ ನಾಯಕರನ್ನ ಭೇಟಿ ಮಾಡುತ್ತೇನೆ. ಕೆಲವರನ್ನ ತೆಗೆದು ಹೊಸಬರಿಗೆ ಚಾನ್ಸ್ ಕೊಡುವ ಸುಳಿವು ಕೊಟ್ಟಿದ್ದಾರೆ.

ಈ ಸಚಿವರನ್ನಿಟ್ಟುಕೊಂಡು ಮುಂದಿನ ಚುನಾವಣೆ ಗೆಲ್ಲುವುದು ಕಷ್ಟ: ಬಿಜೆಪಿ ಶಾಸಕ ಸ್ಫೋಟಕ ಹೇಳಿಕೆ

ಇದರ ಮಧ್ಯೆ ಶಾಸಕರ ಗುಂಪೊಂದು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬಿಜೆಪಿ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

Video Top Stories