Asianet Suvarna News Asianet Suvarna News

ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು:ಬಿ.ಕೆ. ಹರಿಪ್ರಸಾದ್‌

ಸಚಿವ ಸ್ಥಾನ ಕೈತಪ್ಪಿದ ಬೇಸರದಲ್ಲಿರುವ ಎಂಎಲ್‌ಸಿ ಬಿಕೆ ಹರಿಪ್ರಸಾದ್‌, ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು ಎಂದು ಹೇಳಿದ್ದಾರೆ. ಈಡಿಗಿ-ಬಿಲ್ಲವ ಸಮಾಜದ ಸಭೆಯಲ್ಲಿ ಅವರು ಈ ಮಾತು ಹೇಳಿದ್ದಾರೆ.
 

ಬೆಂಗಳೂರು (ಜು.22): ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಾಗಿರುವ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ಸಿಎಂ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಡಿಗ-ಬಿಲ್ಲವರ ಸಮಾಜದ ಸಭೆಯಲ್ಲಿ ಮಾತನಾಡಿದ ಅವರು, 'ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು' ಎಂದು ಹೇಳಿದ್ದಾರೆ.

ರಾಜಕೀಯವಾಗಿ ನಮ್ಮ ಸಮುದಾಯ ಮುಂದೆ ಬರುತ್ತಿಲ್ಲ. ಯಾರದ್ದೋ ಷಡ್ಯಂತ್ರಕ್ಕೆ ನಾವು ಬಲಿಯಾಗುತ್ತಿದ್ದೇವೆ ಎಂದು ಅನಿಸ್ತಾ ಇದೆ. ಸಿದ್ಧರಾಮಯ್ಯ ನಮಗೆ ರಾಜಕೀಯವಾಗಿ ಏನೂ ಸಹಾಯ ಮಾಡಿಲ್ಲ. ನಾನೇ ಅವರಿಗೆ ಸಹಾಯ ಮಾಡಿದ್ದೇನೆ ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ರಾಹುಲ್‌ ಗಾಂಧಿ ವಿರುದ್ಧದ ಷಡ್ಯಂತ್ರ, ದ್ವೇಷ ರಾಜಕೀಯಕ್ಕೆ ಬಿಜೆಪಿಗೆ ಜನತೆ ತಕ್ಕ ಉತ್ತರ: ಬಿಕೆ ಹರಿಪ್ರಸಾದ್

ನಾನು ಜಾತಿ ಹೆಸರಲ್ಲಿ ರಾಜಕೀಯ ಮಾಡಿಲ್ಲ. ನಾನು ಮಂತ್ರಿಯಾಗೋದು, ಬಿಡೋದು ಬೇರೆ ಪ್ರಶ್ನೆ. ಐದು ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೇನೆ. ನಾನು ಯಾರ ಬಳಿಯೂ ಭಿಕ್ಷೆ ಬೇಡೋದಿಲ್ಲ. ಎದೆ ಕೊಟ್ಟು ನಿಲ್ಲುತ್ತೇನೆ. ಇಲ್ಲದೇ ಇದ್ದಲ್ಲಿ ಬೆಂಗಳೂರಿನಲ್ಲಿ 49 ವರ್ಷ ರಾಜಕಾರಣ ಮಾಡೋಕೆ ಆಗ್ತಾ ಇರಲಿಲ್ಲ ಎಂದು ಹೇಳಿದ್ದಾರೆ.

Video Top Stories