ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ ಆರಂಭ: ಕೇಸರಿ ಹುರಿಯಾಳುಗಳ ಪರ ಪ್ರಧಾನಿ ಮತಶಿಕಾರಿ

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಇಂದು 26 ಕಿ.ಮೀ ರ್ಯಾಲಿ ಸಾಗಲಿದೆ.

First Published May 6, 2023, 11:27 AM IST | Last Updated May 6, 2023, 11:27 AM IST

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿ ಇಂದು ಪ್ರಧಾನಿ ಮೋದಿ ರೋಡ್‌ ಶೋ ನಡೆಸುತ್ತಿದ್ದಾರೆ.  ಹೀಗಾಗಿ ಇಡೀ ಬೆಂಗಳೂರು ಕೇಸರಿಮಯವಾಗಿದೆ. ಮೊದಲ ದಿನ ಬೆಂಗಳೂರಲ್ಲಿ 26 ಕಿ.ಮೀ ರೋಡ್‌ ಶೋ ನಡೆಯಲಿದೆ. ಜೆಪಿ ನಗರದ ಬ್ರಿಗೇಡ್‌ ಮಿಲೇನಿಯಂನ ಸೋಮೇಶ್ವರ ಸಭಾಭವನದಿಂದ ರೋಡ್‌ ಶೋ ಆರಂಭವಾಗಿದೆ. ತೆರೆದ ವಾಹನದಲ್ಲಿ ಮೋದಿ ರೋಡ್‌ ಶೋ ಆರಂಭಿಸಿದ್ದಾರೆ. ಪ್ರಧಾನಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್‌ ಸಾಥ್‌ ನೀಡಿದ್ದಾರೆ. ಶನಿವಾರ ಬೆಳಗ್ಗೆ 10.20ಕ್ಕೆ ಮೋದಿ ರೋಡ್‌ ಶೋ ಆರಂಭವಾಗಿದ್ದು, ಜೆಪಿ ನಗರದಿಂದ ಮಲ್ಲೇಶ್ವರದವರೆಗೂ ಸುಮಾರು 26.5 ಕಿಮೀ ರೋಡ್‌ ಶೋ ಸಾಗಲಿದೆ. ಮೋದಿ ಸಾಗುವ ರಸ್ತೆಯುದ್ದಕ್ಕೂ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ. ರಸ್ತೆಯದ್ದಕ್ಕೂ ಜನ ಸಾಗರವೇ ನೆರೆದಿದೆ. 

ಇದನ್ನೂ ವೀಕ್ಷಿಸಿ: ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ