ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವುದು ಹಿಟ್ಲರ್‌ ಸರ್ಕಾರ : ಎಂ.ಬಿ. ಪಾಟೀಲ್‌ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಅಧಿಕಾರದ ದುರುಪಯೋಗದ ವಿರುದ್ಧ ಹೋರಾಡುತ್ತೇವೆ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ಹೊರ ಹಾಕಿದ್ದಾರೆ.
 

Share this Video
  • FB
  • Linkdin
  • Whatsapp

ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಕಳುಹಿಸುವುದಾಗಿ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದರು. ಈ ಹೇಳಿಕೆಗೆ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವುದು ಹಿಟ್ಲರ್‌ ಸರ್ಕಾರ. ಇಂತಹ ಬೆದರಿಕೆಗಳು ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಮಾನ್ಯ. ಆದ್ರೆ ನಾವು ನ್ಯಾಯಾಲಯದ ಒಳಗೆ ಮತ್ತು ಹೋರಾಡುತ್ತೇವೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಅಧಿಕಾರ ಸ್ವೀಕರಿಸಿದ ಹದಿನೈದು ದಿನಗಳೊಳಗೆ, ಅಧಿಕಾರ ದುರುಪಯೋಗ ಮಾಡಿಕೊಳ್ಳುವ ಈ ಬಹಿರಂಗ ಬೆದರಿಕೆಗಳು ಸಿದ್ದರಾಮಯ್ಯ ಸರ್ಕಾರದ ಸಾಮಾನ್ಯ ಲಕ್ಷಣವಾಗಿದೆ ಎಂದು ರಾಷ್ಟ್ರೀಯ ಬಿಜೆಪಿ ಯುವ ಘಟಕದ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ಎಂಬಿ ಪಾಟೀಲರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ: ರಕ್ತದ ಮಡುವಿನಲ್ಲಿ ಶುರುವಾಗಿದೆ ರಾಜಕೀಯ

Related Video