ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!
ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಹೋರಾಟದಿಂದ ಹಿಂದೆ ಸರಿಯಲು ದೂರುದಾರ ಸ್ನೇಹಮಯಿಕೃಷ್ಣಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದ್ದಾರೆ. ಸಿಎಂ ಪತ್ನಿಯ ಆಪ್ತ ಸಹಾಯಕ ಎಂದು ಹೇಳಿಕೊಂಡ ವ್ಯಕ್ತಿಯಿಂದ ಹಣದ ಆಮಿಷ ಬಂದಿದೆ ಎಂದು ತಿಳಿಸಿದ್ದಾರೆ. ಇಡಿ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಹೋರಾಟ ವಿಚಾರದ ಬಗ್ಗೆ ದೂರುದಾರ ಸ್ನೇಹಮಯಿಕೃಷ್ಣ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಈ ಮುಡಾ ಪ್ರಕರಣದಿಂದ ಹಿಂದೆ ಸರಿಯಲು ನನಗೆ ಹಣದ ಆಮಿಷ ಒಡ್ಡಲಾಗಿದೆ. ಹರ್ಷ ಹಾಗೂ ಶ್ರೀನಿಧಿ ಎಂಬ ಇಬ್ಬರು ವ್ಯಕ್ತಿಗಳಿಂದ ಹಣದ ಆಮಿಷ ಬಂದಿದೆ. ಇನ್ನು ಹಣದ ಆಮಿಷ ಒಡ್ಡಿದ ಹರ್ಷ ಎನ್ನುವ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಆಪ್ತ ಸಹಾಯಕ ಎಂದು ಹೇಳಿಕೊಂಡಿದ್ದಾರೆ. ಇದೇ ಡಿ.13 ರಂದು ಮುಡಾ ಬಳಿ ನನ್ನನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಪಾರ್ವತಮ್ಮ ಮಾನಸಿಕವಾಗಿ ನೊಂದಿದ್ದಾರೆ. ಪ್ರಕರಣವನ್ನ ಸಿಬಿಐಗೆ ವಹಿಸಬೇಕೆನ್ನುವ ಅರ್ಜಿ ವಾಪಸ್ ಪಡೆಯಿರಿ. ಲೋಕಾಯುಕ್ತ ಸಮಸ್ಯೆ ನಮಗೆ ಏನು ಸಮಸ್ಯೆ ಇಲ್ಲ. ಸಿಬಿಐ ಆದರೆ ನಮಗೆ ಸಮಸ್ಯೆ ಇದೆ. ನಿಮಗೆ ಎಷ್ಟು ಹಣ ಬೇಕು ಕೇಳಿ ನಾವು ಕೊಡುತ್ತೇವೆಂದು ಹರ್ಷ ಕಾಲು ಹಿಡಿದುಕೊಂಡಿದ್ದಾರಂತೆ. ಆದರೆ, ಇದನ್ನ ನಾನು ನಿರಾಕರಿಸಿದೆ. ಡಿ.15 ರಂದು ಮನೆಗೆ ತೆರಳಿ ಮಗನ ಬಳಿಯಲ್ಲಿ ಇದೇ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಈಗಾಗಲೇ ಇನ್ನೊಬ್ಬ ಹೋರಾಟಗಾರನಿಗೆ 3 ಕೋಟಿ ರೂ. ಮಾತನಾಡಿ 1.5 ಕೋಟಿ ರೂ. ಕೊಟ್ಟಿದ್ದೇವೆ ಎಂದು ಹರ್ಷ ಹಣದ ಬ್ಯಾಗ್ ತೋರಿಸಿದ್ದಾನೆ. ಹಣದ ಆಮಿಷಕ್ಕೆ ನನ್ನ ಮಗ ಒಪ್ಪಿಲ್ಲ ಎಂದು ಹೇಳಿದರು.
ಇದನ್ನೂ ಓದಿ: ಅನುದಾನ ಕೇಳಿದ ಶಾಸಕರಿಗೆ ಪಂಗನಾಮ; ಹಾರಿಕೆ ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ!
ಇನ್ನು ಈಗಾಗಲೇ ಮನೆ ಬಳಿ ಬಂದ ವಿಡಿಯೋ ಹಾಗೂ ನನಗೆ ಹಣದ ಆಮಿಷ ಒಡ್ಡಲು ನನಗೆ ಫೋನ್ ಮಾಡಿದ ದಾಖಲೆ ಎಲ್ಲವುಗಳನ್ನು ಇಟ್ಟುಕೊಂಡು ನಿನ್ನೆ ಜಾರಿ ನಿರ್ದೇಶನಾಲಯಗೆ (ಇಡಿ) ದೂರು ಕೊಟ್ಟಿದ್ದೇನೆ. ಜೊತೆಗ, ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಇಂತಹ ಆಮಿಷಕ್ಕೆ ಒಪ್ಪುವುದಿಲ್ಲ. ನಾನು ಜೀವಂತ ಆಗಿರುವುದರೊಳಗೆ ಇದಕ್ಕೊಂದು ತಾರ್ಕಿಕ ಅಂತ್ಯ ಹಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದರು.