ಮೋದಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್, ಕುರುಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ!
ಎಪ್ರಿಲ್ 28 ರಿಂದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಬರೋಬ್ಬರಿ 20ಕ್ಕೂ ರ್ಯಾಲಿ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ.
ಬೆಂಗಳೂರು (ಏ.27): ಎಪ್ರಿಲ್ 28 ರಿಂದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಬರೋಬ್ಬರಿ 20 ರ್ಯಾಲಿ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಕರ್ನಾಟಕದ ಒಂದೊಂದು ಭಾಗದಲ್ಲಿ ಸಮಾವೇಶ, ರೋಡ್ ಶೋಗಳನ್ನು ಆಯೋಜಿಸಲು ಬಿಜೆಪಿ ಪ್ಲಾನ್ ಮಾಡಿದೆ. ಅಂದರೆ, ಏ.28ರಿಂದ ಮೇ 7ರವರೆಗಿನ ಅವಧಿಯಲ್ಲಿ ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಸಭೆ, ಸಮಾರಂಭಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ, ಹಿಂದುತ್ವ ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ರಾಜ್ಯದಲ್ಲಿ ಪ್ರಚಾರ ಮಾಡಿದ್ದಾರೆ. ಇತ್ತ ರಾಜ್ಯ ಲಿಂಗಾಯಿತ ನಾಯಕರು ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಕೌಂಟರ್ ನೀಡಿದೆ.