Asianet Suvarna News Asianet Suvarna News

ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ, ಜೋಕರ್: ಗುಡುಗಿದ ಸಿದ್ದು

ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ಮುಂದುವರೆಸಿದ್ದು, ಕಟೀಲ್ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದು ಗುಡುಗಿದ್ದಾರೆ.

ಬೆಂಗಳೂರು, (ಅ.21): ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ಮುಂದುವರೆಸಿದ್ದು, ಕಟೀಲ್ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದು ಗುಡುಗಿದ್ದಾರೆ.

ನಳಿನ್ ಕುಮಾರ್ ಕಟೀಲ್ ಮಾತಿಗೆ ಯಡಿಯೂರಪ್ಪ ಬೇಸರ

ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಟೀಲ್ ಒಬ್ಬ ಜೋಕರ್, ಅವರ ತಲೆ ಕೆಟ್ಟಿದೆ. ಓರ್ವ ಅಪ್ರಬುದ್ಧ ರಾಜಕಾರಣಿಯಾಗಿದ್ದಾರೆ. ಇಂತವರನ್ನು ಬಿಜೆಪಿ ನಾಯಕರು ರಾಜ್ಯಾಧ್ಯಕ್ಷರ ಪಟ್ಟದಿಂದ ಮೊದಲು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.