ರಾಜ್ಯ ಬಿಜೆಪಿ ಸರ್ಜರಿಗೆ ಹೈಕಮಾಂಡ್ ತಯಾರಿ, ರಾಜೀನಾಮೆ ಸುದ್ದಿ ಬೆನ್ನಲ್ಲೇ ಕಟೀಲ್ ಸ್ಪಷ್ಟನೆ!
ನಳೀನ್ ಕುಮಾರ್ ಕಟೀಲ್ ರಾಜೀನಾಮೆ ಗೊಂದಲ, ಬಿಜೆಪಿಯೊಳಗೆ ಪೈಪೋಟಿ, ರಾಜ್ಯಕ್ಕೆ 10 ಕೆಜಿ ಅಕ್ಕಿ ಸವಾಲು, ಕೇಂದ್ರದ ಎಜೆನ್ಸಿ ಜೊತೆ ಚರ್ಚೆ,ಹಾವೇರಿ ಲೋಕಸಭಾ ಕ್ಷೇತ್ರದಿಂದ ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸುವ ಪ್ರಯತ್ನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ವಿಧಾನಸಭಾ ಚುನಾವಣಾ ಸೋಲಿನ ಬಳಿಕ ಹೈಕಮಾಂಡ್ ಪರಾಮರ್ಶೆ ನಡೆಸಿದೆ. ಸೋಲಿಗೆ ಕಾರಣಗಳನ್ನು ಪಟ್ಟಿ ಮಾಡಿದೆ. ಇದೀಗ ರಾಜ್ಯ ಬಿಜೆಪಿಗೆ ಸರ್ಜರಿ ಮಾಡಲು ಬಿಜೆಪಿ ಹೈಕಮಾಂಡ್ ತೆರೆಮರೆಯಲ್ಲಿ ತಯಾರಿ ನಡೆಸುತ್ತಿದೆ ಅನ್ನೋ ಮಾಹಿತಿಗಳು ಹೊರಬಿದ್ದಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ ಅನ್ನೋ ಗೊಂದಲ ಸೃಷ್ಟಿಯಾಗಿತ್ತು. ಇದಕ್ಕೆ ಸ್ವತಃ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಕಟೀಲ್ ರಾಜೀನಾಮೆ ನೀಡಿಲ್ಲ ಎಂದರೂ, ಬಿಜೆಪಿಯೊಳಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿದೆ.