ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?

ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. 

Share this Video
  • FB
  • Linkdin
  • Whatsapp

ರಾಜಕಾರಣದಲ್ಲಿ ಶಾಶ್ವತವಾಗಿ ಯಾರೂ ಮಿತ್ರರೂ ಅಲ್ಲ, ಶತ್ರುಗಳೂ ಅಲ್ಲ ಹಾಗೂ ಶತ್ರುವಿನ ಶತ್ರು ಮಿತ್ರ ಎಂಬ ಮಾತಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯೇ ಸಾಕ್ಷಿ. ರಾಜಕೀಯ ಕಡು ವೈರಿಗಳಾಗಿರುವ ದೇವೇಗೌಡ ಕುಟುಂಬ ಮತ್ತು ಡಿ.ಕೆ. ಸೋದರರ ನಡುವಿನ ಜಿದ್ದಾಜಿದ್ದಿ ಕಾಳಗದಿಂದಾಗಿ ಈ ಬಾರಿ ಬೊಂಬೆನಾಡು ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆಯುತ್ತಿದೆ. ಚನ್ನಪಟ್ಟಣ ಕ್ಷೇತ್ರ ಗೆಲ್ಲುವುದು ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಕುಟುಂಬ ಹಾಗೂ ಸಿ.ಪಿ.ಯೋಗೇಶ್ವರ್‌ಗೆ ಪ್ರತಿಷ್ಠೆಯ ಪ್ರಶ್ನೆ. ಜಿಲ್ಲೆಯಲ್ಲಿ ಜೆಡಿಎಸ್ ಅಸ್ತಿತ್ವವನ್ನು ಮರು ಸ್ಥಾಪಿಸಲು ದೇವೇಗೌಡರು ಮತ್ತು ಜಿಲ್ಲೆಯನ್ನು ಕ್ಲೀನ್ ಸ್ವೀಪ್ ಮಾಡಲು ಡಿ.ಕೆ.ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್ ಪಣ ತೊಟ್ಟಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಅವರಿಗೆ ಚನ್ನಪಟ್ಟಣದ ಗೆಲುವು ಮತ್ತಷ್ಟು ಶಕ್ತಿ ತಂದು ಕೊಡುವುದು ನಿಶ್ಚಿತ. ಹಾಗಾಗಿ ಬೊಂಬೆನಾಡಿನ ಮಂದಿ ಯಾರಿಗೆ ಮತ ಚಲಾಯಿಸುತ್ತಾರೆ ಎಂಬ ಪ್ರಶ್ನೆಗೆ ನನ್ನ ವೋಟು ನನ್ನ ಮಾತು ಮುಖಾಂತರ ಉತ್ತರ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video