News Hour: ನರೇಂದ್ರ ಮೋದಿ ಹ್ಯಾಟ್ರಿಕ್ ಪದಗ್ರಹಣ, ರಾಷ್ಟ್ರಪತಿ ಭೇಟಿಯಾಗಿ ಹಕ್ಕು ಮಂಡನೆ!
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಅವರು ಸರ್ಕಾರ ರಚನೆಯ ಹಕ್ಕು ಮಂಡನೆ ಸಲ್ಲಿಸಿದ್ದಾರೆ.
ನವದೆಹಲಿ (ಜೂ.7): ಬಿಜೆಪಿ ನೇತೃತ್ವದ ಎನ್ಡಿಎ ಅಧಿಕಾರಕ್ಕೆ ಕೌಂಟ್ಡೌನ್ ಶುರುವಾಗಿದೆ. ಸರ್ಕಾರ ರಚನೆಗೆ ರಾಷ್ಟ್ರಪತಿ ಮುರ್ಮು ಆಹ್ವಾನ ನೀಡಿದ್ದಾರೆ. ಭಾನುವಾರ ಸಂಜೆ 7.15ಕ್ಕೆ ಮೋದಿ ಹ್ಯಾಟ್ರಿಕ್ ಪದಗ್ರಹಣ ಮಾಡಲಿದ್ದಾರೆ.
ಇದಕ್ಕೂ ಮುನ್ನ ಐತಿಹಾಸಿಕ ಘಟನೆಗೆ ಸಂಸತ್ ಭವನದ ಸೆಂಟ್ರಲ್ ಹಾಲ್ ಸಾಕ್ಷಿಯಾಗಿದೆ. NDA ನಾಯಕನಾಗಿ ಮೋದಿ ಸರ್ವಾನುಮತದ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿ ನಾಯಕತ್ವಕ್ಕೆ ಪ್ರಮುಖ ಮಿತ್ರಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ದೊಡ್ಡಮಟ್ಟದ ಬೆಂಬಲ ನೀಡಿದೆ.
ಅಂದು ಗೆಲುವಿಗೆ ಆಶೀರ್ವದಿಸಿದ್ದ ತಾಯಿ, ಇಂದು ಮೋದಿ ಏಕಾಂಗಿ!
ಇಂದು ಹಕ್ಕುಮಂಡನೆಗೂ ಮುನ್ನ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಹಿರಿಯರಾದ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹಾಗೂ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.