Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

ಲೋಕಸಭೆಗೆ ಅಬ್ಬರದ ಪ್ರಚಾರ ಮಾಡ್ತಿರುವ ಮೋದಿ 
ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಮೋದಿ ಸಭೆ
3ನೇ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡ್ತಿರುವ ಮೋದಿ

Share this Video
  • FB
  • Linkdin
  • Whatsapp

ಶಿವಮೊಗ್ಗ: ಮಾ.18ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಆಗಮಿಸಲಿದ್ದು, ಶಿವಮೊಗ್ಗದ (Shivamogga) ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಮೋದಿ ಸಭೆ ಆಯೋಜನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 1.15ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಬಾರಿ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಸುಮಾರು 10km ದೂರದ ರಸ್ತೆ ಮಾರ್ಗವಾಗಿ ಫ್ರೀಡಂ ಪಾರ್ಕ್‌ನನ್ನು ಮೋದಿ ತಲುಪಲಿದ್ದಾರೆ. ಬಳಿಕ ಒಂದೂವರೆ ಗಂಟೆಗಳ ಕಾಲ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ತೆರಳಲಿದ್ದಾರೆ. ಬೆಳಗ್ಗೆ ತೆಲಂಗಾಣದಲ್ಲಿ(Telangana) ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ಆಗಮಿಸಿ ಸಂಜೆ 4ಕ್ಕೆ ತಮಿಳುನಾಡಿನ(Tamilnadu) ಕೊಯಮತ್ತೂರ್‌ಗೆ ತೆರಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಬೊಮ್ಮನಕಟ್ಟೆ , ಎಪಿಎಂಸಿ ಪ್ರಾಂಗಣದಲ್ಲಿ, ರೈಲ್ವೆ ನಿಲ್ದಾಣ ಮೊದಲಾದ ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Video 10.5 ಲಕ್ಷ ಮತಗಟ್ಟೆ, 55 ಲಕ್ಷ ಇವಿಎಂ: ಏ.19ರಿಂದ ಜೂ.1ರ ವರೆಗೆ ಲೋಕಸಭಾ ಚುನಾವಣೆ!

Related Video