National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದು ಕಿಡಿಕಾರಿದ್ದಾರೆ.

First Published Feb 20, 2022, 3:05 PM IST | Last Updated Feb 20, 2022, 3:05 PM IST

ಬೆಂಗಳೂರು, (ಫೆ.20): ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ತೀವ್ರ ಸ್ವರೂಪ ಪಡೆದುಕೊಂಡ ಈಶ್ವರಪ್ಪ ಮಾತು,ಅತ್ತ ಹೋರಾಟಕ್ಕೆ ಕಾಂಗ್ರೆಸ್ ಕರೆ, ಇತ್ತ ಬಿಜೆಪಿ ತುರ್ತು ಸಭೆ

ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.  ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆ.21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ (Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ತಾಲೂಕು ಕೇಂದ್ರ, ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದು ಕಿಡಿಕಾರಿದ್ದಾರೆ.