ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ: ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಶೆಟ್ಟರ್‌ಗೆ ಇಲ್ವಾ ಅವಕಾಶ?
ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ ನಡೆಯಲಿದ್ದು, ರಾಷ್ಟ್ರೀಯ ಯುವ ಜನೋತ್ಸವಕ್ಕೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಭರ್ಜರಿಯಾಗಿ ಸಿಂಗಾರಗೊಳ್ಳುತ್ತಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೂ ಭರ್ಜರಿ ತಯಾರಿ ನಡೆದಿದೆ. 26ನೇ ರಾಷ್ಟೀಯ ಯುವ ಜನೋತ್ಸವಕ್ಕೆ ಮೋದಿ ಚಾಲನೆ ನೀಡಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ ಜಗದೀಶ್ ಶೆಟ್ಟರ್'ಗೆ ಇಲ್ವಾ ಅವಕಾಶ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಆಹ್ವಾನ ಪತ್ರಿಕೆಯಲ್ಲಿ ಜಗದಿಶ್ ಶೆಟ್ಟರ್ ಹೆಸರು ಕೈಬಿಟ್ಟಿರುವ ಆರೋಪವಿದೆ. ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ಪತ್ರಿಕೆಯ ಪ್ರತಿ ಹರಿದಾಡುತ್ತಿದೆ.