ಬೊಮ್ಮಾಯಿ ಭೇಟಿ ನಂತರ ಬದಲಾದ 'ಆನಂದ'...ರಾಜೀನಾಮೆ ಚಾನ್ಸೇ ಇಲ್ಲ!

* ಕರ್ನಾಟಕ ಸಚಿವ ಸಂಪುಟದಲ್ಲಿ ಖಾತೆ ಖ್ಯಾತೆ
* ಆನಂದ್ ಸಿಂಗ್ ಭೇಟಿ ನಂತರ ಸಿಎಂ ಬೊಮ್ಮಾಯಿ ಸ್ಪಷ್ಟ ಮಾತು!
*ಬಿಎಸ್‌ವೈ ಮನೆಗೆ ರಾಜೂ ಗೌಡ ಆನಂದ್ ಸಿಂಗ್ ಕರೆದುಕೊಂಡು ಹೋದ ಕತೆ!
*ಸಿಎಂ ಭೇಟಿ ನಂತರ ಆನಂದ್ ಸಿಂಗ್ ಹೇಳಿದ್ದೇನು?

Share this Video
  • FB
  • Linkdin
  • Whatsapp

ನವದೆಹಲಿ(ಆ. 11) ಸಚಿವ ಆನಂದ್ ಸಿಂಗ್ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಇದಕ್ಕೂ ಮುನ್ನ ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಆನಂದ್ ಸಿಂಗ್ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. 

ಆನಂದ್ ಸಿಂಗ್ ಹಗೆ ಖಡಕ್ ಸೂಚನೆ ಕೊಟ್ಟ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆನಂದ್ ಸಿಂಗ್ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ಆನಂದ್ ಸಿಂಗ್ ಖಾತೆ ಕ್ಯಾತೆ ಸುಖಾಂತ್ಯ ಕಂಡಂತಾಗಿದೆ. ಬುಧವಾರ ಬೆಳಗ್ಗೆ ಮಾತನಾಡಿದ್ದ ಆನಂದ್ ಸಿಂಗ್ ರಾಜಕೀಯ ನಿವೃತ್ತಿಯ ಮಾತುಗಳನ್ನು ಆಡಿದ್ದರು. ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದ ಆನಂದ್ ಸಿಂಗ್ ಇನ್ನು ಮುಂದೆ ಯಾವ ಹೆಜ್ಜೆ ಇಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. 

Related Video