ನಮ್ಮ ತಂದೆ ಏನು ಅನ್ಯಾಯ ಮಾಡಿದ್ರು: ಕಣ್ಣೀರಿಟ್ಟ ನಿಖಿಲ್
ರಾಜ್ಯದಲ್ಲಿ ನಡೆದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲದ ಜೆಡಿಎಸ್ ಪಕ್ಷದ ಸ್ಥಿತಿ ಈಗ ಹೇಳತೀರದಾಗಿದೆ. ಅದರಲ್ಲೂ ಜೆಡಿಎಸ್ ಪ್ರಾಬಲ್ಯವಿರುವ ಮಂಡ್ಯದ ಕೆ.ಆರ್.ಪೇಟೆಯ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.
ಬೆಂಗಳೂರು, [ಡಿ.10]: ರಾಜ್ಯದಲ್ಲಿ ನಡೆದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಒಂದೂ ಸ್ಥಾನ ಗೆಲ್ಲದ ಜೆಡಿಎಸ್ ಪಕ್ಷದ ಸ್ಥಿತಿ ಈಗ ಹೇಳತೀರದಾಗಿದೆ. ಅದರಲ್ಲೂ ಜೆಡಿಎಸ್ ಪ್ರಾಬಲ್ಯವಿರುವ ಮಂಡ್ಯದ ಕೆ.ಆರ್.ಪೇಟೆಯ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ರೈತರ ಸಾಲ ಮನ್ನಾ ಮಾಡಿದರೂ ಜನ ನಮ್ಮ ಕೈ ಹಿಡಿಯಲಿಲ್ಲ, ನಮ್ಮ ತಂದೆ ಮಾಡಿದ ಅನ್ಯಾಯವಾದರೂ ಏನು ಎಂದು ಕಣ್ಣೀರಿಟ್ಟರು.