ನಿಖಿಲ್ ಕುಮಾರಸ್ವಾಮಿಯನ್ನ ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ: HDK ಘೋಷಣೆ

ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ (Sumalatha) ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯೆ ನೀಡಿದರು.

First Published Mar 31, 2022, 3:53 PM IST | Last Updated Mar 31, 2022, 3:53 PM IST

ರಾಮನಗರ, (ಮಾ.31): ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ (Sumalatha) ವಾಗ್ದಾಳಿ ನಡೆಸಿದ್ದ ವಿಚಾರಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯೆ ನೀಡಿದರು.

Karnataka JDS ಅನಿತಾ ಕುಮಾರಸ್ವಾಮಿ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡಲ್ಲ, ಅಧಿಕೃತ ಘೋಷಣೆ

ಮುಂದಿನ ಬಾರಿ ನಡೆಯುವ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯನ್ನ ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ.  ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಇವತ್ತಿನ ಹೇಳಿಕೆಗಳು ನೋಡಿದಾಗ ನನ್ನ ಮನಸ್ಸಿಗೆ ಬಂದಿದೆ . ಅವತ್ತು ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಹೇಳಿದರು.