ಡಿಕೆಶಿಗೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆ? ಸಿದ್ದರಾಮಯ್ಯ ಹೇಳಿದ್ದಿಷ್ಟೇ!
ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾಗಲಿದೆ, ಈಗಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ಡಿ.ಕೆ.ಶಿವಕುಮಾರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಬೆಂಗಳೂರು (ಅ.26): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾಗಲಿದೆ, ಈಗಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿರುವ ಡಿ.ಕೆ.ಶಿವಕುಮಾರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಸಂಕೀರ್ಣ ರಾಜಕೀಯ ಸಂದರ್ಭಗಳಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಬಂಡೆಯಂತೆ ನಿಂತು, ಬಿಜೆಪಿ ತಂತ್ರಗಳನ್ನು ವಿಫಲಗೊಳಿಸಿದ ಕಾರಣಕ್ಕೆ ಡಿಕೆಶಿಯನ್ನು ಬಲಿಪಶುಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಾದಿಸುತ್ತಾ ಬಂದಿದೆ. ಡಿಕೆಶಿ ವಿರುದ್ಧ ಕೇಂದ್ರೀಯ ಸಂಸ್ಥೆಗಳನ್ನು ಛೂಬಿಟ್ಟು ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಮಹತ್ವದ ಹುದ್ದೆ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.