Asianet Suvarna News Asianet Suvarna News

ಸಂಪುಟ ವಿಸ್ತರಣೆಗೆ ಮೂಹೂರ್ತ ಫಿಕ್ಸ್, ಸಚಿವರ ಪಟ್ಟಿ ಕಳುಹಿಸಿದ ಮುಖ್ಯ ಕಾರ್ಯದರ್ಶಿ

ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು,  ನಾಳೆ ಬುಧವಾರ (ಜ. 13) ಸಾಯಂಕಾಲ 3.50ಕ್ಕೆ 7 ರಿಂದ 8 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಖುದ್ದು ಸಿಎಂ ಬಿಎಸ್ ಯಡಿಯೂರಪ್ಪನವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಡಿ.12): ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು,  ನಾಳೆ ಬುಧವಾರ (ಜ. 13) ಸಾಯಂಕಾಲ 3.50ಕ್ಕೆ 7 ರಿಂದ 8 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಖುದ್ದು ಸಿಎಂ ಬಿಎಸ್ ಯಡಿಯೂರಪ್ಪನವರು ಸ್ಪಷ್ಟಪಡಿಸಿದ್ದಾರೆ.

ಸಿಎಂ ಮಹತ್ವದ ಹೇಳಿಕೆ: ಏಳೆಂಟು ಸಚಿವರು ಪ್ರಮಾಣ ವಚನ ಸ್ವೀಕಾರ ಫಿಕ್ಸ್, ಒಬ್ಬರಿಗೆ ಕೋಕ್

ಈ ಬಗ್ಗೆ ಇಂದು (ಮಂಗಳವಾರ) ಬೆಂಗಳೂರಿನಲ್ಲಿ ಖುದ್ದು ಸಿಎಂ ಬಿಎಸ್‌ವೈ ಸುದ್ದಿಗಾರರೊಂದಿಗೆ ಮಾತನಾಡಿ, 7 ರಿಂದ 8 ಜನ ಸಂಪುಟಕ್ಕೆ ಸೇರಿಕೊಳ್ಳುತ್ತಿದ್ದಾರೆ. ಅವರಿಗೆಲ್ಲರಿಗೂ ನಾಳೆ ಮಧ್ಯಾಹ್ನ 3:30ಕ್ಕೆ ರಾಜಭವನಕ್ಕೆ ಬನ್ನಿ ಎಂದು ಹೇಳಿದ್ದೇನೆ. ಯಾರು ಯಾರು ಎಂಬುದರ ಪಟ್ಟಿಯನ್ನು ಇಂದು (ಮಂಗಳವಾರ) ರಾತ್ರಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.  ಆದ್ರೆ, ಯಾರು ಪ್ರಮಾಣಚನ ಸ್ವೀಕರಿಸಲಿದ್ದಾರೆ ಎನ್ನುವುದು ಮಾತ್ರ ಸಸ್ಪೆನ್ಸ್.

Video Top Stories