Asianet Suvarna News Asianet Suvarna News

ಸಿದ್ದರಾಮಯ್ಯ ನನ್ನ ನಡುವೆ ಯಾವುದೇ ಗುದ್ದಾಟವಿಲ್ಲ: ಡಿಕೆಶಿ

ವಿಧಾನಪರಿಷತ್ತಿಗೆ ಹಿರಿಯ ನಾಯಕ ಎಸ್‌.ಆರ್‌. ಪಾಟೀಲ್‌ ಆಯ್ಕೆ ವಿಚಾರ ಡಿಕೆಶಿ-ಸಿದ್ದರಾಮಯ್ಯ ಬಣಗಳ ನಡುವೆ ಕಗ್ಗಂಟು ಸೃಷ್ಟಿಸಿದೆ. 

ಬೆಂಗಳೂರು (ಮೇ.23): ವಿಧಾನಪರಿಷತ್ತಿಗೆ ಹಿರಿಯ ನಾಯಕ ಎಸ್‌.ಆರ್‌. ಪಾಟೀಲ್‌ ಆಯ್ಕೆ ವಿಚಾರ ಡಿಕೆಶಿ-ಸಿದ್ದರಾಮಯ್ಯ ಬಣಗಳ ನಡುವೆ ಕಗ್ಗಂಟು ಸೃಷ್ಟಿಸಿದೆ. 

ಪರಿಷತ್ ಚುನಾವಣೆ: ಹೈಕಮಾಂಡ್ ಮಟ್ಟದಲ್ಲಿ SR ಪಾಟೀಲ್ ಪರ ಡಿಕೆಶಿ ಬ್ಯಾಟಿಂಗ್

ಸಿದ್ದರಾಮಯ್ಯ-  ನನ್ನ ನಡುವೆ ಭಿನ್ನಾಭಿಪ್ರಾಯ ಇಲ್ಲ. ಎಸ್‌ ಆರ್ ಪಾಟೀಲ್ ನಮ್ಮ ಹಿರಿಯ ನಾಯಕರು. ವಯಸ್ಸಾಯ್ತು ಅಂತ ತಂದೆಯನ್ನು ಮನೆಯಿಂದ ಹೊರಗೆ ಹಾಕಲು ಆಗುತ್ತಾ..? ನಮ್ಮ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದೇವೆ' ಎಂದು ಡಿಕೆಶಿ ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರು ಉತ್ತರ ಕರ್ನಾಟಕದ ಹಿರಿಯ ನಾಯಕ ಎಸ್‌.ಆರ್‌.ಪಾಟೀಲ್‌ ಪರ ಲಾಬಿ ನಡೆಸಿರುವುದು ಹಾಗೂ ಪಾಟೀಲ್‌ ಆಯ್ಕೆಗೆ ಸಿದ್ದರಾಮಯ್ಯ ಸುತರಾಂ ಒಪ್ಪದಿರುವುದು ಕಗ್ಗಂಟು ಸೃಷ್ಟಿಸಿದೆ ಎನ್ನಲಾಗಿದೆ. 
 

Video Top Stories