
ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!
ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ.
ಮುಂಬೈ (ಜೂ. 30): ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. ಮಹಾ ಅಘಾಡಿ ಸರ್ಕಾರದ ಪತನದ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ (Maharashtra) ಹೊಸ ಸರ್ಕಾರ ರಚನೆ ಪ್ರಕ್ರಿಯೆ ಬಿರುಸುಗೊಂಡಿದೆ.
ಉದ್ಧವ್ ಠಾಕ್ರೆ ರಾಜೀನಾಮೆ ಅಂಗೀಕಾರ, ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರ ರಚನೆಗೆ ತಯಾರಿ!
ವಿಶ್ವಾಸಮತ ಕಳೆದುಕೊಂಡಿದ್ದ ಉದ್ಧವ್ ಠಾಕ್ರೆ ಅನ್ಯಮಾರ್ಗವಿಲ್ಲದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಎರಡೂವರೆ ಅಧಿಕಾರ ನಡೆಸಿದ್ದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿದೆ. ಹೀಗಾಗಿ ಎರಡು ವಾರಗಳಿಂದ ಮೂರು ರಾಜ್ಯಗಳಿಗೆ ಹರಡಿಕೊಂಡಿದ್ದ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ. ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಜು.1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.