
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ವೇ ಇಲ್ಲ Arun Singh
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಸವರಾಜ ಬೊಮ್ಮಾಯಿಯವರು ಕಾಮನ್ ಮ್ಯಾನ್ ಸಿಎಂ, ಜನತೆಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
ಬೆಂಗಳೂರು(ಮೇ.3): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ವೇ ಇಲ್ಲ, ನಾಯಕತ್ವ ಬದಲಾವಣೆ ಬರೀ ಕಪೋಲಕಲ್ಪಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh ) ಹೇಳಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
PROFESSOR RECRUITMENT SCAM ಪ್ರೊ. ನಾಗರಾಜ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯ
ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ,ಬಸವರಾಜ ಬೊಮ್ಮಾಯಿ (Basavaraj Bommai ) ಕಾಮನ್ ಮ್ಯಾನ್ ಸಿಎಂ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ, ನಾಯಕತ್ವ ಬದಲಾವಣೆ ಕೇವಲ ಕಪೋಲಕಲ್ಪಿತ. ಬೊಮ್ಮಾಯಿಯವರೇ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಜನ ಬಯಸುತ್ತಿದ್ದಾರೆ ಎಂದು ಕೂಡ ಅರುಣ್ ಸಿಂಗ್ ಹೇಳಿದ್ದಾರೆ.