
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿ ವಿರುದ್ಧ ತಿರುಗಿಬಿದ್ದ ದಳಪತಿಗಳು
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದ್ರೆ, ಇತ್ತ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸಿಡಿದೆದ್ದಿದ್ದಾರೆ.
ಬೆಂಗಳೂರು, (ಡಿ.26): ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕುರಿತು ಉಭಯ ಪಕ್ಷದ ನಾಯಕರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಪ್ರತಿ ಹೆಜ್ಜೆಯಲ್ಲೂ ದಳಪತಿಗಳು ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
Add Asianetnews Kannada as a Preferred Source

ಬಿಜೆಪಿಗೆ ಕುಮಾರಸ್ವಾಮಿ ಬೆಂಬಲ: ಪಕ್ಷದ ನಡೆಗೆ ಸಿಡಿದೆದ್ದ ಮತ್ತೋರ್ವ ಜೆಡಿಎಸ್ ನಾಯಕ...!
ಇತ್ತ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದ್ರೆ, ಇತ್ತ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸಿಡಿದೆದ್ದಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಹುದಿನಗಳ ನಂತರ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡು ದಿಢೀರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.