ಪಕ್ಷ ಶಿಸ್ತು ಉಲ್ಲಂಘಿಸಿದ ಯತ್ನಾಳ್‌ಗೆ ನೋಟಿಸ್‌: ಕೇಂದ್ರ ಶಿಸ್ತು ಸಮಿತಿ ಬುಲಾವ್

ರಾಜ್ಯದಲ್ಲಿ ಸಚಿವ ಮುರುಗೇಶ್‌ ನಿರಾಣಿ ಮತ್ತು ರಾಜ್ಯದ ಇತರೆ ನಾಯಕರಿಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅವರನ್ನು ಬಿಜೆಪಿಯ ಶಿಸ್ತು ಸಮಿತಿಯು ದೆಹಲಿಗೆ ಕರೆಸಿಕೊಂಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜ.21): ರಾಜ್ಯದಲ್ಲಿ ಸಚಿವ ಮುರುಗೇಶ್‌ ನಿರಾಣಿ ಮತ್ತು ರಾಜ್ಯದ ಇತರೆ ನಾಯಕರಿಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅವರನ್ನು ಬಿಜೆಪಿಯ ಶಿಸ್ತು ಸಮಿತಿಯು ದೆಹಲಿಗೆ ಕರೆಸಿಕೊಂಡಿದೆ. ಅಲ್ಲಿ ಯಾವ ತೀರ್ಮಾನ ಆಗುತ್ತದೆ ಗೊತ್ತಿಲ್ಲ. ಪಕ್ಷದಲ್ಲಿ ಯಾರೇ ಶಿಸ್ತು ಉಲ್ಲಂಘನೆ ಮಾಡಿದರೂ ಅವರ ವಿರುದ್ಧ ಖಂಡಿತವಾಗಿಯೂ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. 

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಭಾರಿ ಪ್ರಮಾಣದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೀಸಲಾತಿ ಹೋರಾಟ ನಡೆಯುತ್ತಿದೆ. ಮೀಸಲಾತಿ ವಿಚಾರವಾಗಿ ಪಂಚಮಸಾಲಿ ಸಮುದಾಯದ ಓಲೈಕೆ ಉದ್ದೇಶದಿಂದ ಆಡಳಿತ ಪಕ್ಷದ ಸದಸ್ಯರಾಗಿದ್ದುಕೊಂಡು, ಸರ್ಕಾರದ ವಿರುದ್ಧ ಯತ್ನಾಳ್‌ ಮಾತನಾಡಿದ್ದರು.
 

Related Video