ಸದನ ಆರಂಭವಾದ್ರೂ ಆಯ್ಕೆಯಾಗದ ವಿಪಕ್ಷ ನಾಯಕ: ಇಂದು ರಾಜ್ಯಕ್ಕೆ ಆಗಮಿಸಲಿರುವ ವೀಕ್ಷಕರು

ವಿಪಕ್ಷ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಇಂದು ರಾಜ್ಯಕ್ಕೆ ವೀಕ್ಷಕರು ಬರಲಿದ್ದು, ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ.
 

Share this Video
  • FB
  • Linkdin
  • Whatsapp

ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದೆ. ಹಾಗಿದ್ರು ಬಿಜೆಪಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಇಂದು ರಾಜ್ಯಕ್ಕೆ ಇಬ್ಬರು ವೀಕ್ಷಕರು ಆಗಮಿಸಲಿದ್ದು, ಶಾಸಕರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ. ಬಳಿಕ ಪ್ರತಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ವೀಕ್ಷಕರಾಗಿ ಮನ್ಸೂಕ್‌ ಮಾಂಡವೀಯ ಮತ್ತು ವಿನೋದ್‌ ತಾವಡೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಧಿವೇಶನಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ ಇಲ್ಲ. ಸದ್ಯ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಋಷಿಮುನಿ ಅವತಾರದಲ್ಲಿ ರಾಕಿ ಮಿಂಚಿನ ಸಂಚಲನ: ಯಶ್ ಯಾವೆಲ್ಲಾ ಲುಕ್‌ನಲ್ಲಿ ಹೇಗೆಲ್ಲಾ ಕಾಣಿಸ್ತಾರೆ ?

Related Video