ವಿಪಕ್ಷ ನಾಯಕನ ಆಯ್ಕೆಗೆ ಹೈಕಮಾಂಡ್‌ ತಂತ್ರ: ಜುಲೈ 2ರಂದು ರಾಜ್ಯಕ್ಕೆ ನಾಯಕರ ಎಂಟ್ರಿ?

ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಹೈಕಮಾಂಡ್‌ ತಂತ್ರವನ್ನು ರೂಪಿಸುತ್ತಿದೆ. ಜುಲೈ 2 ರಂದು ಹೈಕಮಾಂಡ್‌ ನಾಯಕರು ರಾಜ್ಯಕ್ಕೆ ಬರುವ ಸಾಧ್ಯತೆ ಇದೆ.

First Published Jun 29, 2023, 11:59 AM IST | Last Updated Jun 29, 2023, 11:59 AM IST

ಪ್ರತಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಹೈಕಮಾಂಡ್‌ ತಂತ್ರವನ್ನು ರೂಪಿಸುತ್ತಿದೆ.ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಇದೀಗ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸಲು ಮುಂದಾಗಿದೆ. ಈ ರೇಸ್‌ನಲ್ಲಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್‌ ಯತ್ನಾಳ್‌, ಆರಗ ಜ್ಞಾನೇಂದ್ರ, ಆರ್. ಅಶೋಕ್, ಅಶ್ವತ್ಥನಾರಾಯಣ, ಅರವಿಂದ ಬೆಲ್ಲದ್ ಹೀಗೆ ಸಂಭಾವ್ಯರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗಾಗಿ ಜುಲೈ 2 ರಂದು ಬಿಜೆಪಿ ಹೈಕಮಾಂಡ್‌ ನಾಯಕರು ರಾಜ್ಯಕ್ಕೆ ಆಗಮಿಸಿ, ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕರ ಅಭಿಪ್ರಾಯ ಪಡೆದು ಶಾಸಕಾಂಗ ನಾಯಕನ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ವೀಕ್ಷಿಸಿ: ಕೆ.ಆರ್.ಪುರ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷ..ಲಕ್ಷ ನಗದು ಸಹಿತ ಚಿನ್ನಾಭರಣ ಪತ್ತೆ

Video Top Stories