Asianet Suvarna News Asianet Suvarna News

ಮುಂದಿನ ಸಿಎಂ ಯಾರು? ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಿಷ್ಟು!

ರಾಜ್ಯ ಸಿಎಂ ಸ್ಥಾನಕ್ಕೆ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ ಕೆಲ ವಾರಗಳಿಂದ ಉಂಟಾಗಿದ್ದ ರಾಜಕೀಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ನಾಳೆ, ಮಂಗಳವಾರ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ವೀಕ್ಷಕರ ಟೀಂ ಜೊತೆ ಆಗಮಿಸಲಿದ್ದಾರೆ.

ಬೆಂಗಳೂರು(ಜು.26): ರಾಜ್ಯ ಸಿಎಂ ಸ್ಥಾನಕ್ಕೆ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ ಕೆಲ ವಾರಗಳಿಂದ ಉಂಟಾಗಿದ್ದ ರಾಜಕೀಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬಿಎಸ್‌ವೈ ರಾಜೀನಾಮೆ ಬೆನ್ನಲ್ಲೇ ನಾಳೆ, ಮಂಗಳವಾರ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ವೀಕ್ಷಕರ ಟೀಂ ಜೊತೆ ಆಗಮಿಸಲಿದ್ದಾರೆ.

ಇನ್ನು ಮುಂದಿನ ಸಿಎಂ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅರುಣ್ ಸಿಂಗ್ ಸಂಸದೀಯ ಮಂಡಳಿಯಲ್ಲಿ ಹೊಸ ಸಿಎಂ ಆಯ್ಕೆ ನಡೆಯಲಿದೆ. ಈ ಮಂಡಳಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ. 

Video Top Stories