Party Rounds: ಕರ್ನಾಟಕ ಕುರುಕ್ಷೇತ್ರದ ಸಮಗ್ರ ಚಿತ್ರಣ
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಆಗಿದ್ದು, ಏ.13ರಿಂದ ಮೇ 13ರವರೆಗೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಮೇ10ರಂದು ಮತದಾನ ನಡೆಯಲಿದೆ.
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023ನೇ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಏ.13ರಿಂದ ಅಭಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಬಹುದು. ಏ.20 ನಾಮಪತ್ರ ಸಲ್ಲಿಕೆ ಕೊನೆಯ ದಿನ ಹಾಗೂ ಏ.21 ನಾಮಪತ್ರಗಳ ಪರಿಶೀಲನೆ ಮಾಡಲಾಗುತ್ತದೆ. ಏ.24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಇನ್ನು ಏ.25ರಂದು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ.
ಇನ್ನು ಮೇ8ರವರೆಗೆ ಬಹಿರಂಗ ಪ್ರಚಾರ ಮಾಡಬಹುದು. ಇದಾದ ನಂತರ ಮನೆ ಮನೆ ಪ್ರಚಾರ ಮಾಡಬಹುದು. ಇನ್ನು ಮೇ.10ರಂದು ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇದಾದ ಮೂರು ದಿನಗಳ ನಂತರ ಮೇ 13ರಂದು ಮತ ಎಣಿಕೆ ಆಗಲಿದೆ. ಈ ಬಗ್ಗೆ ಸ್ವತಃ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಈ ಬಾರಿಯ ಚುನಾವಣೆಯಲ್ಲಿ 5.21 ಕೋಟಿ ಮತದಾರರು ತಮ್ಮ ಮತಗಳನ್ನು ಚಲಾವಣೆ ಮಾಡಲು ಅರ್ಹತೆಯನ್ನು ಹೊಂದಿದ್ದಾರೆ ಎಂದು ತಿಳಿಸಿದರು.