Party Rounds ಲೆಕ್ಕಾಚಾರ ಉಲ್ಟಾ ಮಾಡಿದ ಶೆಟ್ಟರ್, ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಹಿನ್ನಡೆಯಾಗುತ್ತಾ?
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜಿಪಿಗೆ ಆಗುವ ನಷ್ಟವೇನು? ಕಾಂಗ್ರೆಸ್‌ಗೆ ಆಗುವ ಲಾಭವೇನು?
ಬೆಂಗಳೂರು(ಏ.17): ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಯಾರೂ ಊಹಿಸಿದ ಬೆಳವಣಿಗೆಗಳು ನಡೆಯುತ್ತಿದೆ. ಜಗದೀಶ್ ಶೆಟ್ಟರ್ ಈಗಾಗಲೇ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಯಡಿಯೂರಪ್ಪ ಬಳಿಕ ಬಿಜೆಪಿಯಲ್ಲಿ ಪ್ರಬಲ ಲಿಂಗಾಯಿತ ನಾಯಕ ಎಂದು ಗುರುತಿಸಿಕೊಂಡಿದ್ದ ಶೆಟ್ಟರ್, ಕಾಂಗ್ರೆಸ್ ಸೇರ್ಪಡೆಯಿಂದ ಕೆಲ ಲೆಕ್ಕಾಚಾರಗಳು ಬದಲಾಗಿದೆ. ಲಿಂಗಾಯಿತರನ್ನು ಬಿಜೆಪಿ ಕಡೆಗಣಿಸುತ್ತಿದೆ ಅನ್ನೋ ಕಾಂಗ್ರೆಸ್ ಆರೋಪಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಿದೆ. ಇತ್ತ ಹುಬ್ಬಳ್ಳಿ ಧಾರವಾಡ ಭಾಗದಲ್ಲಿ ಕಾಂಗ್ರೆಸ್ ಶಕ್ತಿ ವರ್ಧಿಸಿದೆ. ಇಷ್ಟೇ ಅಲ್ಲ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಕಾರ್ಯಕರ್ತರಲ್ಲೂ ಗೊಂದಲ ಸೃಷ್ಟಿಯಾಗಿದೆ.