
ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ
ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.
ಬಳ್ಳಾರಿ, (ಮಾ.08): ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Election Result 2022 ಉತ್ತರ ಪ್ರದೇಶ ಬಿಟ್ಟು ಉಳಿದೆಲ್ಲೆಡೆ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದ ಡಿಕೆಶಿ
ಬಳ್ಳಾರಿಯಲ್ಲಿ ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಹಾಗೂ ಉತ್ತರಾಖಂಡದಲ್ಲೂ ಬಿಜೆಪಿಗೆ ಮುನ್ನಡೆಯಾಗಲಿದೆ. ಕಾಂಗ್ರೆಸ್‌ಗೆ ದೇಶದಲ್ಲಿಲ್ಲ ಉಳಿಗಾಲ, ಪಂಜಾಬ್‌ನಲ್ಲೂ ಪವರ್ ಕಳೆದುಕೊಳ್ಳುತ್ತೆ.ರಾಜ್ಯದಲ್ಲಿ ಸಹ ಕಾಂಗ್ರೆಸ್ ಅಲೆ ಇಲ್ಲ. ಎರಡು ನಾಯಕರ ಪೋಟೋಗೆ ಸೀಮಿತವಾಗಿದೆ ಎಂದು ಡಿಕೆಶಿ ಹಾಗೂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು.