
ಬಿ.ಎಸ್.ವೈ ಭಾಷಣ ನನಗೆ ಸ್ಫೂರ್ತಿ: ನರೇಂದ್ರ ಮೋದಿ ಮೆಚ್ಚುಗೆ
ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಡಿದ ವಿದಾಯದ ಭಾಷಣದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿದ ಕೊನೆಯ ಭಾಷಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತನಾದ ನನಗೆ ಈ ಭಾಷಣ ಸ್ಫೂರ್ತಿ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಗಿದೆ. ಈ ಭಾಷಣ ಖಂಡಿತವಾಗಿ ಕಾರ್ಯಕರ್ತರಿಗೆ ಸ್ಫೂರ್ತಿಯಾಗಲಿದೆ ಎಂದು ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ