
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ!
ಆಗಸ್ಟ್ 26ಕ್ಕೆ ಮಡಿಕೇರಿ ಎಸ್‌ಪಿ ಕಚೇರಿ ಮುತ್ತಿಗೆ ಹಾಕಲು ಸಿದ್ದರಾಮಯ್ಯನವರು ಕರೆ ಕೊಟ್ಟಿದ್ದಾರೆ. ಅಲ್ಲದೇ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬೆಂಗಳೂರು/ಮೈಸೂರು, (ಆ.20): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ಬಿಜೆಪಿ ಹಾಗೂ ಪೊಲೀಸ್ ವೈಫಲ್ಯದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ exclusive ವಿಡಿಯೋ: ಇವನೇ ಆ ಯುವಕ!
ಇನ್ನು ಇದೇ ಆಗಸ್ಟ್ 26ಕ್ಕೆ ಮಡಿಕೇರಿ ಎಸ್‌ಪಿ ಕಚೇರಿ ಮುತ್ತಿಗೆ ಹಾಕಲು ಸಿದ್ದರಾಮಯ್ಯನವರು ಕರೆ ಕೊಟ್ಟಿದ್ದಾರೆ. ಅಲ್ಲದೇ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಜೆಪಿ ಶಾಸಕರ ಕೊಠಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.