ಬೆಂಗಳೂರು ಗಲಭೆಗೆ ನಾನಾ ಬಣ್ಣ, ನಿಲ್ಲದ ರಾಜಕೀಯ ಕೆಸರೆರಚಾಟ

ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ನಾನಾ ಬಣ್ಣ ಬಳಿಯಲಾಗುತ್ತಿದೆ. ಸಾಲದಕ್ಕೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಆ.13): ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ನಾನಾ ಬಣ್ಣ ಬಳಿಯಲಾಗುತ್ತಿದೆ. ಸಾಲದಕ್ಕೆ ರಾಜಕೀಯ ನಾಯಕರ ಆರೋಪ- ಪ್ರತ್ಯಾರೋಪಗಳ ಕೆಸರೆರಚಾಟ ಮುಂದುವರೆದಿದೆ. 

ಬೆಂಗಳೂರು ಗಲಭೆಯ ಸಂಪೂರ್ಣ ಚಿತ್ರಣ

ತನ್ನ ವೋಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ಹಿಂಸಾಚಾರದಲ್ಲಿ ತೊಡಗಿಕೊಂಡಿರುವ ಜನರನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಮತ್ತೊಂದೆಡೆ ಗಲಭೆ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚಿ ಲಾಭ ಮಾಡಿಕೊಳ್ಳಲು ಬಿಜೆಪಿ ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆರೋಪಿಸುತ್ತಿದ್ದಾರೆ.

.ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮ ಸುವರ್ಣ ನ್ಯೂಸ್‌ನಲ್ಲಿ ನಡೆಸಲಾದ ಪಾನೆಲ್ ಚರ್ಚೆಯಲ್ಲಿ ಯಾರೆಲ್ಲ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ

Related Video